ಮೋದಿ ಹುಟ್ಟುಹಬ್ಬ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ
Sep 20 2025, 01:00 AM ISTಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಅಂಗವಾಗಿ ನಡೆದ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಧಣಿವರಿಯದ ನಾಯಕ ನಮ್ಮ ದೇಶದ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು. ದೇಶಕ್ಕೋಸ್ಕರ ಒಂದು ದಿನವೂ ರಜೆ ಪಡೆಯದೆ ದಿನದ ೧೮ ಗಂಟೆಗಳ ಕಾಲ ನಿರಂತರವಾಗಿ ಶ್ರಮಿಸುತ್ತಿರುವ ಏಕೈಕ ನಾಯಕ. ಜಿಲ್ಲೆಯಲ್ಲೆಡೆ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ರಾಷ್ಟ್ರ ನಾಯಕರ ಸೂಚನೆಯ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಕ್ತದಾನ, ಆರೋಗ್ಯ ತಪಾಸಣೆ ಶಿಬಿರ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಅಭಿಯಾನ, ಗಿಡನೆಡುವ ಅಭಿಯಾನದಂತಹ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು ಎಂದು ಮನವಿ ಮಾಡಿದರು.