ಮೋದಿ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗೋದಿಲ್ವೆ?
Mar 12 2024, 02:03 AM ISTಕಾಂಗ್ರೆಸ್ ಗ್ಯಾರಂಟಿಗಳನ್ನು ನೀಡಿದಾಗ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ, ಜನ ಸೋಮಾರಿಗಳಾಗುತ್ತಾರೆ ಎಂದು ಬಿಜೆಪಿಯವರು ಬೇಕಾಬಿಟ್ಟಿಯಾಗಿ ಮಾತನಾಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಎಂದು ಏಕೆ ಮಾಡಿದ್ದಾರೆ? ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ? ಮೋದಿ ಗ್ಯಾರಂಟಿಯಿಂದ ಬಡವರ ಹಸಿದ ಹೊಟ್ಟೆಗಳು ತುಂಬಿಲ್ಲ. ಕಾಂಗ್ರೆಸ್ ಗ್ಯಾರಂಟಿ ಮೇಲೆಯೇ ಲೋಕಸಭೆ ಚುನಾವಣೆಯನ್ನೂ ಮಾಡುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಕಿಡಿಕಾರಿದ್ದಾರೆ.