ಸಂಸದ ರಾಘವೇಂದ್ರ ಗೆಲ್ಲಿಸಿ, ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ ಮನವಿ
Feb 29 2024, 02:04 AM ISTಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿರುವ, ಜನಪರ ಕಾಳಜಿ ಹೊಂದಿರುವ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಮನವಿ ಮಾಡಿದ್ದಾರೆ.