ದೇಶದಲ್ಲಿ ಭಯೋತ್ಪಾದನೆ ನಿಗ್ರಹಿಸಿ, ಶಾಂತಿ ಸ್ಥಾಪಿಸಿದ ಪ್ರಧಾನಿ ಮೋದಿ
Feb 11 2024, 01:49 AM IST ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ, ಭಯೋತ್ಪಾದನೆಯನ್ನು ಹತ್ತಿಕ್ಕುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಸ್ಥಾಪಿಸಲಾಗಿದೆ. ಆರ್ಥಿಕವಾಗಿ ಕಳೆದ 10 ವರ್ಷಗಳಲ್ಲಿ ವಿಶ್ವಮಟ್ಟದಲ್ಲಿ ಹತ್ತನೇ ಸ್ಥಾನದಿಂದ 5ನೇ ಸ್ಥಾನಕ್ಕೇರಿದೆ. ಮತೊಮ್ಮೆ ನರೇಂದ್ರ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವ ಮತ್ತು ರಾಷ್ಟ್ರೀಯ ವಾದವನ್ನು ಮೊಳಗಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರ ಪಡೆ ಸಿದ್ಧವಾಗಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.