ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘65 ಕೋಟಿ ಜನರು ಮತ ಚಲಾಯಿಸಿದ ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ, ಜನತೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲ ನಂಬಿಕೆ ವ್ಯಕ್ತಪಡಿಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಮೂರು ದಿನಗಳಿಂದ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು, ಭದ್ರಾ ಮೇಲ್ದಂಡೆ, ಮೆಟ್ರೋ 3ನೇ ಹಂತ ಸೇರಿ ರಾಜ್ಯದ ಪ್ರಮುಖ ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯ 50ನೇ ವರ್ಚಾಚರಣೆ ಜೂ.25ಕ್ಕೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ‘ಸಂವಿಧಾನವನ್ನು ತಿರಸ್ಕರಿಸಿದ ಆ ನಡೆ ಭಾರತದ ಇತಿಹಾಸಕ್ಕೆ ಕಪ್ಪುಚುಕ್ಕೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.