ಸಮರ್ಪಕವಾಗಿ ಬಸ್ ಓಡಿಸುವಂತೆ ರಸ್ತೆ ತಡೆದು ಧರಣಿ
Sep 11 2025, 01:00 AM ISTರಾಜ್ಯ ಸರ್ಕಾರ ಗ್ರಾಮೀಣ ಸಾರಿಗೆ ವ್ಯವಸ್ಥೆ ಸುಧಾರಿಸುವಲ್ಲಿ ವಿಫಲವಾಗಿದೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಬಸ್ ಓಡಿಸದೆ ಇರುವುದರಿಂದ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬಹಳಷ್ಟು ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ ಕನ್ನಡ ಪರ ಸಂಘಟನೆಗಳು, ಎಬಿವಿಪಿ ಸಂಘಟನೆ ಮೂಲಕ ಹೋರಾಟ ಮಾಡಿ ಮನವಿ ಸಲ್ಲಿಸಿದರೂ ಎಚ್ಚೆತ್ತುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.