ವರ್ಷ ಕಳೆದರೂ ಸಂಚಾರಕ್ಕೆ ಮುಕ್ತವಾಗದ ಐಗಳಿ- ಬಡಚಿ ರಸ್ತೆ
Mar 26 2024, 01:00 AM ISTಐಗಳಿ: ತಾಲೂಕಿನ ಐಗಳಿ ಗ್ರಾಮದಿಂದ ಬಡಚಿ ಗ್ರಾಮದವರೆಗಿನ ರಸ್ತೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ, ಆಮೆಗತಿಯಲ್ಲಿ ಮತ್ತು ತೀರಾ ಕಳಪೆ ಮಟ್ಟದಿಂದ ನಿರ್ಮಾಣ ಮಾಡುತ್ತಿರುವ ಈ ರಸ್ತೆಯನ್ನು ಬೇಗನೆ ಅಭಿವೃದ್ಧಿಗೊಳಿಸುವುದರ ಜೊತೆಗೆ ಗುಣಮಟ್ಟದ ರಸ್ತೆ ನಿರ್ಮಿಸಬೇಕು. ತಾಲೂಕು ಆಡಳಿತ ನಿರ್ಲಕ್ಷ್ಯ ಧೋರಣೆ ತೋರಿದರೇ ಬರುವ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕರಿಸುವುದಾಗಿ ಐಗಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ದೇವೇಂದ್ರ ಬೆಳಗಲಿ ಹೇಳಿದರು.