ಸವಾಲುಗಳನ್ನು ಎದುರಿಸಿಯೇ ರಾಜಕಾರಣ ಮಾಡುವೆ: ಬಿಜೆಪಿ ಅಭ್ಯರ್ಥಿ ಯದುವೀರ್
Mar 15 2024, 01:22 AM ISTಸಂವಿಧಾನದ ಪ್ರಕಾರ ನಾನೂ ಸಾಮಾನ್ಯ ಪ್ರಜೆ. ಜನರು ಆಶೀರ್ವಾದ ಮಾಡಿದರೆ ಸಾಮಾನ್ಯ ವ್ಯಕ್ತಿಯಾಗಿ ಕೆಲಸ ಮಾಡುತ್ತೇನೆ. ಎಸಿ ರೂಂನಿಂದ ಹೊರ ಬಂದು ಸಾರ್ವಜನಿಕರಿಗಾಗಿ ಕೆಲಸ ಮಾಡುವುದು ಕಷ್ಟವೇನಲ್ಲ, ರಾಜವಂಶಸ್ಥರು ಎಂಬ ಪ್ರೀತಿ, ವಿಶ್ವಾಸ, ನಂಬಿಕೆ ನಮ್ಮ ಜನರಲ್ಲಿರುವುದು ಸಹಜ. ನಮ್ಮ ಪೂರ್ವಜರು ಮೈಸೂರು ಸಂಸ್ಥಾನಕ್ಕೆ ನೀಡಿದ ಕೊಡುಗೆಗಳು ನನಗೆ ಶ್ರೀರಕ್ಷೆ. ಅವರ ಜನಪರ ಕಾಳಜಿಯನ್ನು ಆದರ್ಶವಾಗಿಟ್ಟುಕೊಂಡು ಮೈಸೂರನ್ನು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿ ಪಡಿಸಬೇಕೆಂಬ ಕನಸಿದೆ.