• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ದ್ವೇಷ: ಭೀಮನಗೌಡನ ಬರ್ಬರ ಹತ್ಯೆ

Sep 04 2025, 01:01 AM IST
ಕನ್ನಡಪ್ರಭ ವಾರ್ತೆ ಚಡಚಣ ಬಾಗಪ್ಪ ಹರಿಜನ ಕೊಲೆಯಾಗಿ ವರ್ಷ ತುಂಬುವುದರೊಳಗೆ ಭೀಮಾ ತೀರದಲ್ಲಿ ದುಷ್ಕರ್ಮಿಗಳಿಂದ ಮತ್ತೊಂದು ಭೀಕರ ಹತ್ಯೆ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ರೌಡಿಶೀಟರ್‌ ಭೀಮನಗೌಡ ಬಿರಾದಾರ್‌ (42) ಮೇಲೆ ಮೂರ್ನಾಲ್ಕು ಜನ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಬರ್ಬರ ಹತ್ಯೆ ನಡೆಸಿದ್ದಾರೆ. ನಂತರ ಆರೋಪಿಗಳೆಲ್ಲರೂ ಚಡಚಣ ಠಾಣೆಗೆ ತೆರಳಿ ಶರಣಾಗಿದ್ದಾರೆ. ಕೃತ್ಯ ಎಸಗಿದ್ದಾರೆ ಎಂದು ಹೇಳಿಕೊಂಡು ರಜೀವುಲ್ಲಾ ಮಕಾನದಾರ್, ವಸೀಂ ಮಣಿಯಾರ್, ಫಿರೋಜ್ ಅವರಾದ್, ಮೌಲಾಲಿ ಲಾಡೇಸಾಬ್ ಚೋರಗಿ ಠಾಣೆಗೆ ಶರಣಾದ ಆರೋಪಿಗಳು.

ಗಣಪತಿ ಪ್ರತಿಷ್ಠಾಪನೆ ರಾಜಕೀಯ ಕಾರ್ಯಕ್ರಮವಾಗದಿರಲಿ

Sep 04 2025, 01:00 AM IST
ಗಣಪತಿ ಪ್ರತಿಷ್ಠಾಪನೆ ಉತ್ಸವ ಕಾರ್ಯಕ್ರಮಗಳು ರಾಜಕೀಯ ಕಾರ್ಯಕ್ರಮಗಳಾಗದೆ ಸ್ಥಳೀಯ ಪ್ರತಿಭೆಗಳು ಮತ್ತು ಕಲಾವಿದರನ್ನು ಬೆಳೆಸುವ ಕಾರ್ಯಕ್ರಮಗಳಾಗಬೇಕು ಎಂದು ಶಾಸಕ ಷಡಕ್ಷರಿ ತಿಳಿಸಿದರು.

ಬಾನು ಮುಷ್ತಾಕ್ ವಿಚಾರದಲ್ಲಿ ಬಿಜೆಪಿ ರಾಜಕೀಯ

Sep 03 2025, 01:00 AM IST
ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರ ಹೆಸರನ್ನು ಮುಖ್ಯಮಂತ್ರಿಗಳು ಸೂಚಿಸಿದ ಮೇಲೆ ಬಿಜೆಪಿಯವರು ಎಂದಿನಂತೆ ತಮ್ಮ ಧರ್ಮಾಧಾರಿತ ಬೇಳೆಯನ್ನು ಬೇಯಿಸಿಕೊಳ್ಳಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಆರೋಪಿಸಿದರು.

ನಟ ಕಿಚ್ಚ ಸುದೀಪ್‌ ರಾಜಕೀಯ ಪ್ರವೇಶ?

Sep 02 2025, 01:00 AM IST

ಕಿಚ್ಚ ಸುದೀಪ್ ತನ್ನ 52ನೇ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ರಾಜಕಾರಣ ಪ್ರವೇಶ ಕುರಿತಾಗಿ ಮಾರ್ಮಿಕವಾಗಿ ಮಾತನಾಡಿದ್ದಾರೆ.   ‘ನಾನು ರಾಜಕೀಯಕ್ಕೆ ಬರುವ ಬಗ್ಗೆ ಗೊತ್ತಿಲ್ಲ. ಆದರೆ, ಕೆಲವರು ರಾಜಕೀಯಕ್ಕೆ ಬರಬೇಕು ಅನಿಸೋ ರೀತಿ ಆಗಾಗ ಮಾಡ್ತಾರೆ’ ಎಂದು ಹೇಳಿದ್ದಾರೆ.

ಧಾರ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಮಾಡುವುದು ಪಾಪದ ಕೆಲಸ: ಸಚಿವ ಎಚ್.ಕೆ. ಪಾಟೀಲ್

Sep 02 2025, 12:00 AM IST
ಅಂಜನಾದ್ರಿ ಅಭಿವೃದ್ಧಿ ಕುರಿತು ಶಾಸಕ ಗಾಲಿ ಜನಾರ್ದನ ರೆಡ್ಡಿ ಏನು ಹೇಳಿದ್ದಾರೆಂದು ನನಗೆ ಮಾಹಿತಿ ಇಲ್ಲ. ಹೀಗಾಗಿ ಅದಕ್ಕೆ ಉತ್ತರಿಸಲ್ಲ. ಆದರೆ, ಅಂಜನಾದ್ರಿ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದೆ. ಕೇಬಲ್ ಕಾರ್ ಅಳವಡಿಸುವುದು ಸೇರಿದಂತೆ ವಿವಿಧ ಯೋಜನೆ ಒಳಗೊಂಡಿದ್ದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಜಾರಿಗೊಳಿಸಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಜೆಡಿಎಸ್ ನ ಧರ್ಮಸ್ಥಳ ಸತ್ಯ ಯಾತ್ರೆ ರಾಜಕೀಯ ಪ್ರೇರಿತ: ಕೆ.ಎಂ.ಉದಯ್

Sep 01 2025, 01:03 AM IST
ಧರ್ಮಸ್ಥಳ ಕೇವಲ ಜೆಡಿಎಸ್ ಮತ್ತು ಬಿಜೆಪಿಗೆ ಸೀಮಿತವಾಗಿಲ್ಲ. ಎಲ್ಲಾ ಹಿಂದೂ ಧರ್ಮದವರೂ ಕ್ಷೇತ್ರದ ಬಗ್ಗೆ ಭಕ್ತಿ ಮತ್ತು ನಂಬಿಕೆ ಇಟ್ಟುಕೊಂಡು ಶ್ರೀ ಮಂಜುನಾಥ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದಾರೆ.

ಸಹಕಾರಿ ಸಂಘಕ್ಕೆ ರಾಜಕೀಯ ಹಿತಾಸಕ್ತಿ ಸಲ್ಲ: ಶಿವಶಂಕರಪ್ಪ

Sep 01 2025, 01:03 AM IST
ರಾಜಕೀಯ ಹಿತಾಸಕ್ತಿಗಾಗಿ ಸಹಕಾರಿ ಸಂಘಗಳನ್ನು ಹುಟ್ಟು ಹಾಕಬಾರದು ಸಂಘದ ಧ್ಯೇಯೋದ್ದೇಶಗಳನ್ನು ಅರ್ಥೈಸಿಕೊಂಡು ಪ್ರತಿಯೊಬ್ಬ ಸದಸ್ಯರೂ ಜವಾಬ್ದಾರಿಯಿಂದ ವರ್ತಿಸಿದಲ್ಲಿ ಸಂಘ ನಿಶ್ಚಿತ ಗುರಿ ತಲುಪಲು ಸಾದ್ಯ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಶಿಮುಲ್ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಟಿ.ಶಿವಶಂಕರಪ್ಪ ಹಿರೇಜಂಬೂರು ತಿಳಿಸಿದರು.

ಕಾಂಗ್ರೆಸ್ ಪಕ್ಷ ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ: ಜೆಡಿಎಸ್ ಮುಖಂಡರ ಆರೋಪ

Aug 30 2025, 01:00 AM IST
ಈ ಹಿಂದೆ ನಡೆದ ಟಿಎಪಿಸಿಎಂಎಸ್ ಚುನಾವಣೆ, ಮನ್ಮುಲ್ ಚುನಾವಣೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಷ್ಟು ದುರ್ಬಲಗೊಂಡಿರುವ ಕಾಂಗ್ರೆಸ್ಸಿಗರು, ಜೆಡಿಎಸ್ ಬಗ್ಗೆ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ.

ಗ್ರಾಮಗಳ ಅಭಿವೃದ್ಧಿಯಲ್ಲಿ ರಾಜಕೀಯ ಬೇಡ

Aug 30 2025, 01:00 AM IST
ಹೆಬ್ಬಾಳು ಗ್ರಾಮದಲ್ಲಿ ಸಮುದಾಯ ಭವನದ ಅಡುಗೆಮನೆ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಲೋಕಸಭಾ ಸದಸ್ಯರು ಮತ್ತು ಸ್ಥಳೀಯ ವಿಧಾನಸಭಾ ಸದಸ್ಯರು ಅನುದಾನ ನೀಡಿದ ಹಿನ್ನೆಲೆಯಲ್ಲಿ ಸಮುದಾಯದ ಭವನ ನಿರ್ಮಾಣವಾಗಿದೆ. ಸಮುದಾಯದ ಭವನದ ಪಕ್ಕದಲ್ಲಿ ಅಡುಗೆಮನೆ, ಶೌಚಾಲಯ ನಿರ್ಮಿಸಲು ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ‌ ಪಟೇಲ್ 5 ಲಕ್ಷವನ್ನು ನೀಡಿದ್ದಾರೆ. ಈ ಗ್ರಾಮಕ್ಕೆ ಅನುದಾನ ಬರಲು ಮಾಜಿ ಸಚಿವರಾದ ಬಿ.ಶಿವರಾಂ ಕೂಡ ಕಾರಣಕರ್ತರಾಗಿದ್ದಾರೆ. ಗ್ರಾಮದ ಅಭಿವೃದ್ಧಿಯಲ್ಲಿ ಯಾವುದೇ ರಾಜಕಾರಣ ಬೇಡ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ದೇಶಾಣಿ‌ ಆನಂದ್ ಹೇಳಿದರು.

ಡಿಕೆಶಿ ಕ್ಷಮೆ ಕೇಳಿದ್ದು ರಾಜಕೀಯ ಜೀವನದ ಕಪ್ಪು ಚುಕ್ಕೆ

Aug 29 2025, 01:00 AM IST
ಆರ್.ಎಸ್.ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಮೆ ಕೇಳಿರುವುದು ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶಗೌಡ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 57
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved