ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ, ಮುಡಾ ಮಾತ್ರವಲ್ಲ, ವಾಲ್ಮೀಕಿ ಮತ್ತಿತರ ನಿಗಮಗನಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸದನದಲ್ಲೇ ಮುಖ್ಯಮಂತ್ರಿ ಅವ್ಯವಹಾರ ನಡೆದಿರುವುದು 187 ಕೋಟಿ ಅಲ್ಲ 89 ಕೋಟಿ ಎಂದು ಒಪ್ಪಿಕೊಂಡಿದ್ದಾರೆ
ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಒಂದು ಕ್ಷಣವೂ ವಿಳಂಬ ಮಾಡಿದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ನೀಡಿರುವ ಆದೇಶ ಶ್ಲಾಘನೀಯ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು ಎಂದು ವಿಧಾನ ಪರಿಷತ್ ಸದಸ್ಯ ಅಶ್ವತ್ಥ್ ನಾರಾಯಣ್ ತಿಳಿಸಿದರು.