ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು
Dec 28 2024, 12:45 AM ISTರಾಜ್ಯಸಭೆಯಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ರಾಜೀನಾಮೆ ನೀಡಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಉಚ್ಚಾಟಿಸಬೇಕು ಎಂದು ಹಿರಿಯ ದಸಂಸ ಮುಖಂಡ ಎಚ್. ಕೆ. ಸಂದೇಶ್ ಹೇಳಿದರು.ನಾವು ಅಂಬೇಡ್ಕರ್ ಅವರ ಮಕ್ಕಳು, ಮರಿಮಕ್ಕಳು. ನಾವು ಬೇರೆಯವರ ಬಗ್ಗೆ ಅವಮಾನಕರವಾಗಿ ಹೀಯಾಳಿಸುವ ಕೆಲಸ ಮಾಡಿಲ್ಲ. ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.