ರಾಜ್ಯ ಸರ್ಕಾರದಿಂದ ಪಂಚ ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿ-ಸಚಿವ ಶಿವಾನಂದ ಪಾಟೀಲ
Nov 01 2025, 02:30 AM ISTಪಂಚ ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿಯನ್ನು ನಮ್ಮ ಸರ್ಕಾರ ಕೊಟ್ಟಿದೆ. ವಾಸಿಸುವವರನ್ನು ಮನೆಯ ಒಡೆಯರನ್ನಾಗಿ ಮಾಡಿ, 10 ಲಕ್ಷಕ್ಕಿಂತ ಹೆಚ್ಚು ಬೆಲೆ ಬಾಳುವ ಭೂಮಿಗೆ ಮಾಲಿಕನನ್ನಾಗಿ ಮಾಡಿದೆ. ಶಾಸಕ ಶ್ರೀನಿವಾಸ ಮಾನೆ ಕ್ರಿಯಾಶೀಲವಾಗಿ ಕೆಲಸ ಮಾಡಿದ ಪರಿಣಾಮ ಜಿಲ್ಲೆಯಲ್ಲಿಯೇ ಹಾನಗಲ್ ತಾಲೂಕಿನಲ್ಲಿ ಅತೀ ಹೆಚ್ಚು ಫಲಾನುಭವಿಗಳು ಹಕ್ಕುಪತ್ರ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.