ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರ ಈಗ 80 ಪರ್ಸೆಂಟ್ ಭ್ರಷ್ಟಾಚಾರ ನಡೆಸಿ ದೇಶದಲ್ಲೇ ನಂ.1 ಭ್ರಷ್ಟಾಚಾರದ ಸರ್ಕಾರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ ಮಾಡಿದ್ದಾರೆ.
ಮುಸ್ಲಿಮರನ್ನು ಓಲೈಸಲು, ಹಿಂದೂಗಳನ್ನು ಅಪಮಾನ ಮಾಡುತ್ತಿರುವ ರಾಜ್ಯ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕುವ ಶಕ್ತಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಇದೆ. ಈ ಕಾಲ ಸಮೀಪಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗುಡುಗಿದರು.
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಸದಸ್ಯರ ನೇಮಕಾತಿಗೆ ಈವರೆಗೂ ಶೋಧನಾ ಸಮಿತಿಯನ್ನೇ ರಚಿಸದ ರಾಜ್ಯ ಸರ್ಕಾರಗಳ ಧೋರಣೆಯನ್ನು ಕಟು ಶಬ್ದಗಳಿಂದ ಖಂಡಿಸಿರುವ ಹೈಕೋರ್ಟ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕಚೇರಿಯ ಆವರಣದಲ್ಲಿ ಅಂಗವಿಕಲನೋರ್ವ ಹೊಂದಿದ್ದ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಯನ್ನು ತೆರವುಗೊಳಿರುವ ಹಿನ್ನೆಲೆಯಲ್ಲಿ ಮತ್ತೆ ಮಳಿಗೆ ಆರಂಭಿಸಲು ಸ್ಥಳಾವಕಾಶ ಕಲ್ಪಿಸುವ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ರಾಜ್ಯ ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ವಿಧೇಯಕ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷದ್, ಈ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಈಗ ಲೂಟಿ ರಾಮಯ್ಯ ಎನಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.