ರೈತರನ್ನು ಒಕ್ಕಲೆಬ್ಬಿಸುವ ರಾಜ್ಯ ಸರ್ಕಾರ
Oct 14 2024, 01:33 AM ISTಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ಶೇ.50 ಕ್ಕಿಂತ ಹೆಚ್ಚು ಆಸ್ತಿ ಒತ್ತುವರಿ ಆಗಿದೆಂದು ನೂರಾರು ವರ್ಷಗಳಿಂದ ಇಲ್ಲಿನ ರೈತರು ಉಳುತ್ತಿರುವ ಭೂಮಿಯನ್ನು ನೋಟಿಸ್ ನೀಡಿ ವಕ್ಫ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದೆ. ಈಗಾಗಲೇ, ರೈತರಿಗೆ, ಖಾಸಗಿ ವ್ಯಕ್ತಿಗಳಿಗೆ ನೋಟಿಸ್ ನೀಡಿದ್ದು ಪ್ರಕ್ರಿಯೆ ಶುರುವಾಗಿದೆಯೆಂದು ಮಾಧ್ಯಮಗಳು ವರದಿ ಮಾಡಿವೆ. ಸುಮಾರು 30-40 ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.