ತುಂಗಭದ್ರಾ ಮಂಡಳಿಯಲ್ಲಿ (ಟಿಬಿ ಬೋರ್ಡ್) ಆಂಧ್ರಪ್ರದೇಶ ಹಿತ ಕಾಪಾಡುವ ಕಾರ್ಯ ನಡೆಯುತ್ತಿದ್ದು, ಇದನ್ನು ತಪ್ಪಿಸಲು ಕರ್ನಾಟಕದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನಿಯರ್ ಅವರನ್ನು ಮಂಡಳಿಯಲ್ಲಿ ಕಾಯಂ ಅಧಿಕಾರಿಯನ್ನಾಗಿ ನಿಯೋಜನೆಗೆ ರಾಜ್ಯ ಸರ್ಕಾರ ಬೋರ್ಡ್ ಮೇಲೆ ಒತ್ತಡ ಹೇರಲಿ ಎಂಬ ಕೂಗು ಎದ್ದಿದೆ.
ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ, ಮುಡಾ ಮಾತ್ರವಲ್ಲ, ವಾಲ್ಮೀಕಿ ಮತ್ತಿತರ ನಿಗಮಗನಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸದನದಲ್ಲೇ ಮುಖ್ಯಮಂತ್ರಿ ಅವ್ಯವಹಾರ ನಡೆದಿರುವುದು 187 ಕೋಟಿ ಅಲ್ಲ 89 ಕೋಟಿ ಎಂದು ಒಪ್ಪಿಕೊಂಡಿದ್ದಾರೆ
ಕೇಂದ್ರ ಸರ್ಕಾರವು ರಾಜ್ಯಕ್ಕೆ ಎನ್ಡಿಆರ್ಎಫ್ ಹಣ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯದ ಜನರ ಪರವಾಗಿ ನಿಲ್ಲದೆ ಕೇಂದ್ರದ ಮುಂದೆ ಮಂಡಿಯೂರಿದ್ದಾರೆ ಎಂದು ಟೀಕಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (ಪಿಡಿಒ) ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ಮುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನೂ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ