ಚಿತ್ರರಂಗದವರ ಕ್ಷೇಮಾಭಿವೃದ್ಧಿಗೆ ಮಂಡಳಿ ರಚನೆ: ರಾಜ್ಯ ಸರ್ಕಾರ
Jul 20 2024, 12:54 AM ISTಚಲನಚಿತ್ರ ಕಲಾವಿದರು, ಸಂಗೀತಗಾರರು, ನೃತ್ಯಪಟುಗಳು ಸೇರಿದಂತೆ ಚಿತ್ರರಂಗಕ್ಕೆ ಸೇರಿದ ತಾಂತ್ರಿಕ, ಕಲಾತ್ಮಕ ಅಥವಾ ಇತರ ವ್ಯಕ್ತಿಗಳ ಕ್ಷೇಮಾಭಿವೃದ್ಧಿಗಾಗಿ ಪ್ರತ್ಯೇಕ ಮಂಡಳಿ ರಚನೆಗೆ ಸರ್ಕಾರ ಉದ್ದೇಶಿಸಿದ್ದು, ಅದಕ್ಕಾಗಿ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕವನ್ನು ರೂಪಿಸಿದೆ. ಈ ವಿಧೇಯಕವನ್ನು ಶುಕ್ರವಾರ ಸಂಸದೀಯ ವ್ಯವಹಾರಗಳು ಮತ್ತು ಕಾನೂನು ರಚನೆ ಸಚಿವ ಎಚ್.ಕೆ. ಪಾಟೀಲ್ ಮಂಡಿಸಿದರು.