ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ತಳಿರು ತೋರಣಗಳಿಂದ ಸಿಂಗಾರಗೊಂಡ ಸಕಲೇಶಪುರ
Jan 23 2024, 01:47 AM ISTಆಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಕಲೇಶಪುರದಲ್ಲಿ ಹಬ್ಬದ ವಾತಾವಾರಣ ನಿರ್ಮಾಣವಾಗಿತ್ತು. ಪಟ್ಟಣದ ಬಹುತೇಕ ಮನೆಗಳ ಮುಂದೆ ರಂಗೋಲಿ ಹಾಕಿ,ತಳಿರುತೋರಣ ಹಾಗೂ ಬಂಟಿಗ್ಸ್‌ಗಳಿಂದ ಸಿಂಗರಿಸಲಾಗಿದ್ದರೆ, ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದ ಅವರಣದಲ್ಲಿ ಬಜರಂಗದಳ, ವಿಶ್ವಹಿಂದೂ ಪರಿಷತ್ ಹಾಗೂ ದುರ್ಗಾ ವಾಹಿನಿ ವತಿಯಿಂದ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.