ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರೈತ ಆತ್ಮಹತ್ಯೆ
Feb 08 2025, 12:32 AM ISTದೇವರಹಿಪ್ಪರಗಿ: ಮೈಕ್ರೋ ಫೈನಾನ್ಸ್ ಕಂಪನಿಯವರ ಕಿರುಕುಳ ತಾಳಲಾರದೆ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಲಾದಹಳ್ಳಿಯಲ್ಲಿ ಗುರುವಾರ ನಡೆದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯ ಬಸನಗೌಡ ಬಿರಾದಾರ(52) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಸುಮಾರು 8 ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಪಡೆದಿದ್ದು, ಸಾಲ ಪಾವತಿ ಮಾಡುವಂತೆ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.