ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 26ರಂದು ರೈತ ಸಂಘದಿಂದ ಪ್ರತಿಭಟನೆ
Sep 24 2024, 02:01 AM ISTತಾಲೂಕಿನ ಬಹುತೇಕ ಜಲಾಶಯ ಕೆರೆ, ಕಟ್ಟೆಗಳಿಗೆ ನದಿಯಿಂದ ನೀರು ಬಿಡುವ ಸದುದ್ದೇಶದಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಬರಿದಾಗುತ್ತಿರುವ ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಫಲಪ್ರದಗೊಳಿಸಬೇಕು. ಜೊತೆಗೆ ಚೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಕಾಲದಲ್ಲಿ ಯಾವುದೇ ಕೆಲಸ, ಕಾರ್ಯಗಳು ಆಗುತ್ತಿಲ್ಲ. ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸುಟ್ಟು ಹೋದರೆ ದುರಸ್ತಿಪಡಿಸಲು ಇಲ್ಲಿನ ಅಧಿಕಾರಿ, ಸಿಬ್ಬಂದಿ ವರ್ಗದವರು ರೈತರನ್ನು ಕಚೇರಿಗೆ ಅಲೆಯುವಂತೆ ಮಾಡುತ್ತಿದ್ದಾರೆ.