ಅಧಿವೇಶದಲ್ಲಿ ಜಿಲ್ಲೆಯ ಶಾಸಕರು ಧ್ವನಿ ಎತ್ತಿ: ರೈತ ಸಂಘದ ಎ.ಗೋವಿಂದರಾಜು
Dec 08 2024, 01:20 AM ISTಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ದ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಶನಿವಾರ ಸಂಯುಕ್ತ ಹೋರಾಟ-ಕರ್ನಾಟಕ ತುಮಕೂರು ಜಿಲ್ಲಾ ಘಟಕದ ವತಿಯಿಂದ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಾಯಿತು. ರೈತ ಮುಖಡರ ನೇತೃತ್ವದಲ್ಲಿ ತುಮಕೂರಿನ ಸ್ವಾತಂತ್ರ್ಯ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೋಳಿಗೆ ಕಪ್ಪುಪಟ್ಟಿ ಧರಿಸಿ, ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.