ನರೇಗಾದಿಂದ ಬಾಳೆ ಬೆಳೆಗೆ ಸೌಲಭ್ಯ ಸ್ಥಗಿತಕ್ಕೆ ರೈತ ಸಂಘ ಖಂಡನೆ
May 16 2024, 12:55 AM ISTಕೇಂದ್ರ ಸರ್ಕಾರದ ನರೇಗಾ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿರುವುದು ರೈತರಿಗೆ ವರದಾನವಾಗಿದೆ. ಕೃಷಿ ಹೊಂಡ ನಿರ್ಮಾಣ, ಬದು ಹಾಕಿಕೊಳ್ಳುವುದು, ತೆಂಗು ಅಭಿವೃದ್ಧಿ, ಬಾಳೆ ಬೇಸಾಯ ಮುಂತಾದ ಹತ್ತು ಹಲವು ತೋಟಗಾರಿಕಾ ಬೆಳೆಗಳಿಗೆ ನರೇಗಾ ಯೋಜನೆ ಅನುಕೂಲ ಕಲ್ಪಿಸುತ್ತಿತ್ತು. ಆದರೆ, ಏಕಾಏಕಿ ನರೇಗಾ ವ್ಯಾಪ್ತಿಯಿಂದ ಬಾಳೆ ಬೆಳೆಯನ್ನು ಹೊರಗಿಟ್ಟಿರುವುದು ರೈತರಿಗೆ ಮಾಡಿರುವ ಮಹಾ ವಂಚನೆ.