ರೈತರ ಹಿತ ಕಾಯುವ ಅಭ್ಯರ್ಥಿಗಳಿಗೆ ಬೆಂಬಲ: ರೈತ ಸಂಘ ಘೋಷಣೆ
Apr 24 2024, 02:27 AM ISTದೆಹಲಿ ರೈತ ಹೋರಾಟದ ಒತ್ತಾಯಗಳ ಜಾರಿ, ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡಬೇಕು. ದೇಶದ ರೈತರ ಸಂಪೂರ್ಣ ಸಾಲಮನ್ನಾ, 60 ವರ್ಷ ಕೃಷಿ ಸೇವೆ ಸಲ್ಲಿಸಿದ ರೈತರಿಗೆ ಪಿಂಚಣಿ ನೀಡಬೇಕು. ಸಂಸದರ ನಿಧಿಯನ್ನು ಕೆರೆಕಟ್ಟೆ, ಕಾಲುವೆಗಳ ಹುಳೆತ್ತಿಸಲು, ಪುನಶ್ಚೇತನಗೊಳಿಸಲು ಹಾಗೂ ಶಾಲೆ, ಆಸ್ಪತ್ರೆಗಳ, ನಿರ್ಮಾಣಕ್ಕೆ, ಕುಡಿಯುವ ನೀರು ಸೌಲಭ್ಯಕ್ಕೆ ಬಳಸುವುದಾಗಿ ಭರವಸೆ ನೀಡಬೇಕು.