ಮಧ್ಯವರ್ತಿಗಳನ್ನು ನಂಬಿ ರೈತರು ಮೋಸ ಹೋಗಬೇಡಿ
Oct 02 2024, 01:02 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ರಾಜ್ಯದ ರೈತರ ಶ್ರೇಯೋಭಿವೃದ್ಧಿಗಾಗಿ ಮತ್ತು ಅವರ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರಿಯಾಯಿತಿ ದರದಲ್ಲಿ, ಗುಣಮಟ್ಟದ ಬೀಜ ಗೊಬ್ಬರ, ಯಂತ್ರೋಪಕರಣಗಳನ್ನು ನೀಡುತ್ತಿದೆ. ರೈತರು ಮಧ್ಯವರ್ತಿಗಳನ್ನು ನಂಬದೆ ಯಾರಿಗೂ ಲಂಚ ಕೊಡದೇ ಆಯಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಬೀಜ, ಕೃಷಿ ಸಲಕರಣೆಗಳನ್ನು ಪಡೆದುಕೊಳ್ಳಿ. ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಬೇಡಿ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಮಗದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ರೈತರಿಗೆ ಕಿವಿಮಾತು ಹೇಳಿದರು.