ವಿಚ್ಛೇದನ ಕೋರಿದ್ದವರನ್ನು ಒಂದುಗೂಡಿಸಿದ ಲೋಕ ಅದಾಲತ್‌

Sep 17 2024, 12:53 AM IST
ಅರಕಲಗೂಡು ತಾಲೂಕಿನ ಸರಗೂರು ಗ್ರಾಮದ ನರಸಿಂಹಮೂರ್ತಿ ಮತ್ತು ವಿಜಯಕುಮಾರಿ ಕುಟುಂಬ ಕಲಹದಿಂದ 2020ರಲ್ಲಿ ವಿಚ್ಛೇದನ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಶನಿವಾರ ನಡೆದ ಜನತಾ ನ್ಯಾಯಾಲಯದಲ್ಲಿ ನಡೆಸಿದ ನ್ಯಾಯಾಧೀಶರಾದ ನಾಗೇಶ ಮೂರ್ತಿ ಅವರು, ದಂಪತಿ ಹಾಗೂ ಅವರ ಸಂಬಂಧಿಕರು ಮತ್ತು ವಕೀಲರೊಂದಿಗೆ ಸಮಾಲೋಚಿಸಿ ಸಂಧಾನ ನಡೆಸಿ ದಂಪತಿ ವಿಚ್ಛೇದನಕ್ಕೆ ನೀಡಿದ ಅರ್ಜಿಯನ್ನ ಹಿಂಪಡೆದು ಒಬ್ಬರಿಗೊಬ್ಬರು ಅರ್ಥಮಾಡಿಕೊಂಡು ಜೀವನ ಸಾಗಿಸುವುದಾಗಿ ಒಪ್ಪಿದ ಕಾರಣ ನ್ಯಾಯಮೂರ್ತಿಗಳು ನ್ಯಾಯಾಲಯದ ಕೊಠಡಿಯಲ್ಲೆ ಇಬ್ಬರು ದಂಪತಿಗಳು ಹಾರ ಬದಲಾಯಿಸಿಕೊಳ್ಳುವ ಮೂಲಕ ಒಂದುಗೂಡಿಸಿದರು. ಇಂತಹ ಘಟನೆ ಇಲ್ಲಿನ ನ್ಯಾಯಾಲಯದಲ್ಲಿ ಇದೇ ಮೊದಲ ಬಾರಿಗೆ ನಡೆದಿರುವುದು ಹರ್ಷದಾಯಕ ಎಂದು ವಕೀಲರು ಹರ್ಷ ವ್ಯಕ್ತಪಡಿಸಿದರು.