ಎರಡನೇ ಬಾರಿಗೆ 1991ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಮೋಸದಿಂದ ನನ್ನನ್ನು ಸೋಲಿಸಲಾಯಿತು. ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನೆರವು ನೀಡಿದ್ದರು
ಬೆಂಗಳೂರು ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯ ಮಹದೇವಪುರದಲ್ಲಿ ಮತಗಳ್ಳತನ ನಡೆದಿದೆ. ಈ ಕುರಿತು ಶೀಘ್ರವೇ ನಾನು ಆಟಂ ಬಾಂಬ್ ಸ್ಫೋಟಿಸಲಿದ್ದೇನೆ ಎಂದು ಇತ್ತೀಚೆಗೆ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಆರೋಪಗಳಿಗೆ ಪೂರಕವಾದ ಅಂಕಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ.
ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ನಡೆಗಳನ್ನು ಮುಲಾಜಿಲ್ಲದೆ ಖಂಡಿಸುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.