ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ನಾಯಕರ ಪ್ರಚಾರ ಕಾರ್ಯಕ್ರಮಗಳ ಆಯೋಜನೆ ಹಾಗೂ ಪ್ರವಾಸ ಕಾರ್ಯಕ್ರಮಗಳ ಜವಾಬ್ದಾರಿ ನಿರ್ವಹಿಸಲು ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್ ಮತ್ತು ಬಸವರಾಜ ರಾಯರಡ್ಡಿ ಅವರನ್ನು ರಾಜ್ಯಮಟ್ಟದ ಚುನಾವಣಾ ಉಸ್ತುವಾರಿಗಳನ್ನಾಗಿ ನೇಮಿಸಿದೆ.