ಲೋಕಸಭೆ ಮತ ಎಣಿಕೆ: ಪೂರ್ವ ಸಿದ್ಧತೆ ಮಾಡಿಕೊಳ್ಳಿ
May 28 2024, 01:06 AM ISTಕನ್ನಡಪ್ರಭ ವಾರ್ತೆ ವಿಜಯಪುರ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್ 4 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತ ಮತ ಎಣಿಕೆಗೆ ಸಿದ್ಧವಾಗಿದೆ. ಮತ ಎಣಿಕೆಗೆ ನಿಗದಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ, ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.