ಲೋಕಸಭೆ ಚುನಾವಣೆ ಭದ್ರತೆ: ಹೊನ್ನಾಳಿ ಸಂಚಲನ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ
Apr 24 2024, 02:24 AM ISTಲೋಕಸಭಾ ಚುನಾವಣೆ ಹಿನ್ನೆಲೆ ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕಿನಾದ್ಯಂತ ಪೊಲೀಸ್ ಪಹರೆ ಇನ್ನಷ್ಟು ಹೆಚ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ಹಾಗೂ ಸುರಕ್ಷತಾ ಭಾವನೆ ಮೂಡಿಸುವ ಸಲುವಾಗಿ ಪೊಲೀಸ್ ಇನ್‌ಸ್ಪೆಕ್ಟರ್ ಮುದ್ದುರಾಜ್ ನೇತೃತ್ವದಲ್ಲಿ ಪೊಲೀಸರು ಹೊನ್ನಾಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.