ಫಾರ್ಚೂನ್ ಹೊಟೇಲಿಗೆ 2.5 ಕೋಟಿ ರು. ವಂಚನೆ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ
Oct 22 2024, 12:23 AM ISTಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಆಡಳಿತ ನಿರ್ದೇಶಕರಾಗಿರುವ ದುಬೈನ ಪಾರ್ಚೂನ್ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಬಂಧಿಸಲ್ಪಟ್ಟಿದ್ದ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ (31) ಜಾಮೀನು ತಿರಸ್ಕರಿಸಿ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಜೀತು ಆರ್.ಎಸ್. ಆದೇಶಿಸಿದ್ದಾರೆ.