ಕಾಂಗ್ರೆಸ್‌ನಿಂದ ರಾಜ್ಯದ ಜನತೆಗೆ ವಂಚನೆ: ಮಾಜಿ ಡಿಸಿಎಂ ಗೋವಿಂದ ಕಾರಜೋಳ
Jan 25 2024, 02:02 AM ISTಮುಧೋಳ: ರಾಜ್ಯದ ಮತದಾರರಿಗೆ ಸುಳ್ಳು ಭರವಸೆ ನೀಡಿ, ಮೋಸ ಮಾಡಿ ಮತಪಡೆದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬರಗಾಲ ಆರಂಭವಾಗಿದೆ, ಬರಕ್ಕೆ ರೈತರು ತತ್ತರಿಸಿ ಹೋಗಿದ್ದಾರೆ. ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ದೂರಿದರು. ಬುಧವಾರ ಸ್ಥಳೀಯ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇವು ಬ್ಯಾಂಕ್, ಗೋಶಾಲೆ ಈವರೆಗೂ ತೆರೆದಿಲ್ಲ. ಅನ್ನಕ್ಕಾಗಿ ಉತ್ತರ ಕರ್ನಾಟಕದ ಜನ ಗುಳೆ ಹೋಗುವುದು ತಪ್ಪಿಲ್ಲ. ಹೊಸ ಕಾಮಗಾರಿಗಳಂತೂ ಆರಂಭವಾಗಿಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.