ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಹಣ ವಂಚನೆ
Oct 21 2023, 12:30 AM ISTಸೇನೆ ಹಾಗೂ ರೇಲ್ವೆ ಇಲಾಖೆಯಲ್ಲಿ ಗ್ರಾಮೀಣ ಯುವಕರಿಗೆ ಕ್ರೀಡಾ ಕೋಟಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಸುಮಾರು 16 ಲಕ್ಷಕ್ಕೂ ಹೆಚ್ಚು ಹಣ ಪಡೆದು ಮೋಸ ಮಾಡಿರುವ ಪ್ರಕರಣ ತಾಲೂಕಿನ ಶ್ರೀರಾಂಪುರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಭಂದಿಸಿದಂತೆ ಶಿವರಾಜ್ (45) ಹಾಗೂ ಭೀಮವ್ವ ಎಂಬುವವರ ಮೇಲೆ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ.