ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಕರಣಗಳಲ್ಲಿ ಆರೋಪಿತರಿಗೆ ಕರುಣೆ ತೋರಿದಲ್ಲಿ ಇಡೀ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದಿರುವ ಹೈಕೋರ್ಟ್, ಮಹಿಳೆಯೊಬ್ಬರಿಗೆ ₹4 ಕೋಟಿ ವಂಚಿಸಿದ್ದ ಪ್ರಕರಣದ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಸೈಬರ್ ವಂಚಕರು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೃದ್ಧೆಗೆ ಕರೆ ಮಾಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ ಬ್ಯಾಂಕ್ ಖಾತೆ ಪರಿಶೀಲಿಸುವುದಾಗಿ ₹42.85 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ ಆರೋಪದಡಿ ವೈಟ್‌ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಂಕ್‌ಗೆ ನಕಲಿ ದಾಖಲೆ ಸಲ್ಲಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ 20 ವರ್ಷಗಳ ಬಳಿಕ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರು ಆರೋಪಿಗಳು ದೋಷಿ ಎಂದು ನಿರ್ಣಯಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಎಲ್ಲಾ ಆರೋಪಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ತೆರಿಗೆ ವಂಚನೆ ಮಾಡಿದ ಉದ್ಯಮಿಗಳು, ಬಿಲ್ಡರ್‌ಗಳು, ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಏಜೆಂಟ್‌ಗಳಿಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಬೆಳ್ಳಂಬೆಳ್ಳಗೆ ಶಾಕ್ ನೀಡಿದ್ದು, ಬೆಂಗಳೂರು, ಮೈಸೂರು ಸೇರಿದಂತೆ 30ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.