ಹೊಳೆನರಸೀಪುರದಲ್ಲಿ ವಾಹನ ಪಾರ್ಕಿಂಗ್
Nov 14 2024, 12:49 AM ISTಪಟ್ಟಣದ ಡಾ. ಅಂಬೇಡ್ಕರ್ ವೃತ್ತ, ಶ್ರೀ ಜಯಚಾಮರಾಜೇಂದ್ರ ಒಡೆಯರ್ ವೃತ್ತ ಹಾಗೂ ಸಾರ್ವಜನಿಕ ಆಸ್ಪತ್ರೆ ರಸ್ತೆಯ ಬದಿಗಳು ಪೊಲೀಸ್ ಇಲಾಖೆ ಅಳವಡಿಸಿದ ಸಿಸಿ ಕ್ಯಾಮರಾಗಳ ಕಣ್ಗಾವಲಿನಲ್ಲಿದ್ದು, ಇವುಗಳ ಕಣ್ಗಾವಲಿಗೆ ಪೊಲೀಸ್ ಠಾಣೆಯಲ್ಲಿ ಟಿವಿ ಅಳವಡಿಸಲಾಗಿದೆ. ಆದ್ದರಿಂದ ಪರ ಊರುಗಳಿಗೆ ಕರ್ತವ್ಯಕ್ಕೆ ತೆರಳುವ ನೌಕರರು ತಮ್ಮ ವಾಹನಗಳನ್ನು ಬಹಳ ಬುದ್ಧಿವಂತಿಕೆಯಿಂದ ಸಿಸಿ ಕ್ಯಾಮರಾ ಕಣ್ಗಾವಲು ಇರುವ ಸ್ಥಳಗಳಲ್ಲಿ ನಿಲ್ಲಿಸಿ ತೆರಳುತ್ತಾರೆ. ಈ ಕಾರಣದಿಂದ ನಾಗರಿಕರಿಗೆ ತೊಂದರೆ ಉಲ್ಪಣಿಸಿದೆ.