ವಾಹನ ಹಾಗೂ ಮನೆಗಳವು ಮಾಡುತ್ತಿದ್ದ ಕುಖ್ಯಾತ ಕಳ್ಳರ ಬಂಧನ : ₹35 ಲಕ್ಷ ಮೌಲ್ಯದ ಸೊತ್ತು ವಶ
Sep 24 2024, 01:48 AM ISTಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಹನ ಹಾಗೂ ಮನೆಗಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ₹35 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂಧನದಿಂದ 11 ಕಳವು ಪ್ರಕರಣಗಳು ಪತ್ತೆಯಾಗಿವೆ.