ಶಾಲಾ ವಾಹನ ಅಪಘಾತ: ನಾಲ್ಕು ಮಕ್ಕಳ ಸಾವು, 30ಕ್ಕೂ ಅಧಿಕ ಜನ ಗಾಯ
Jan 30 2024, 02:01 AM ISTಜಮಖಂಡಿ: ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ಮಕ್ಕಳನ್ನು ಮನೆಗೆ ತಲುಪಿಸಲು ತೆರಳುತ್ತಿದ್ದ ಶಾಲಾ ವಾಹನವೊಂದು ನಿಂತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದ ಬಳಿ ವಿಜಯಪುರ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿಗಳು, ಪಾಲಕರು ಗಾಯಗೊಂಡಿದ್ದು, ಅವರನ್ನು ಜಮಖಂಡಿ ಮತ್ತು ವಿಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.