ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 2 ದಿನದಲ್ಲಿ ಹಾರ್ಟ್ ಅಟ್ಯಾಕ್‌ಗೆ ಐವರು ಮೃತಪಟ್ಟಿದ್ದಾರೆ.
ಅನಾರೋಗ್ಯಪೀಡಿತ ತಾಯಿ ಮತ್ತು ತನ್ನ ಮಗನ ಆರೈಕೆ ಮಾಡಲೆಂದು, ವಯೋವೃದ್ಧೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣದ ಆರೋಪಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಪಡಿಸಿ ಜಾಮೀನು ನೀಡಿದೆ.
ಒಂದೂವರೆ ತಿಂಗಳು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮಾಡಿ 4.70 ಕೋಟಿ ರು. ದೋಚಿದ್ದ ಸೈಬರ್ ವಂಚಕರ ತಂಡದ ಇಬ್ಬರು ಕಿಡಿಗೇಡಿಗಳನ್ನು ಆಗ್ನೇಯ ವಿಭಾಗದ ಸಿಇನ್ ಪೊಲೀಸರು ಬಂಧಿಸಿದ್ದಾರೆ.
ಸೈಬರ್ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.