ವೈದ್ಯೆ ಅತ್ಯಾಚಾರ ಹತ್ಯೆ ಖಂಡಿಸಿ ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ
Aug 24 2024, 01:22 AM IST ಕೋಲ್ಕತಾದಲ್ಲಿ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹತ್ಯೆ ಖಂಡಿಸಿ ಚನ್ನರಾಯಪಟ್ಟಣ ತಾಲೂಕು ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ವಿವಿಧ ಸಂಘಟನೆಗಳು ಹಾಗೂ ವೈದ್ಯರ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಈ ದೌರ್ಜನ್ಯವನ್ನು ಖಂಡಿಸಿ ವಿವಿಧ ಘಟನೆಗಳು ಮತ್ತು ಮಹಿಳೆಯರು ಹೋರಾಟವನ್ನು ನಡೆಸುತ್ತಿದ್ದಾರೆ. ಆದರೆ ಇಂತಹ ಹೋರಾಟದಿಂದ ಯಾವುದೇ ಪ್ರಯೋಜನವಾಗಿಲ್ಲ. ಇಂತಹ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳಿಗೆ ಕಡಿವಾಣ ಹಾಕುವ ಕಾನೂನು ಕ್ರಮಗಳು ಹೆಚ್ಚಾಗಬೇಕು ಎಂದು ಡಾ. ವಿ. ಮಹೇಶ್ ಒತ್ತಾಯಿಸಿದರು.