ಶಾಲೆ ಜಾಗದಲ್ಲಿ ಇಂದಿರಾ ಕ್ಯಾಂಟೀನ್: ಅಭಿಪ್ರಾಯ ಸಂಗ್ರಹ
Jul 02 2024, 01:39 AM ISTಮಲೇಬೆನ್ನೂರು ಪಟ್ಟಣದ ಜಿ.ಬಿ.ಎಂ. ಶಾಲಾ ಕಟ್ಟಡವನ್ನು ತೆರವು ಗೊಳಿಸಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಕುರಿತು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿತ್ತು. ಇದಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಾಶ್ರೀ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದೆ.