ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು, 25 ವರ್ಷಗಳಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯವಾದಾಗ ನಾನು ರೇಬಲ್ ಆಗಲೇಬೇಕು. ಅದು ನನ್ನ ಸ್ವಭಾವ. ರೇಬಲ್ ಅನ್ನೋದೇ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತು ತಹಸೀಲ್ದಾರ್ ವೆಂಕಟೇಶಪ್ಪ ನಡುವೆ ಹೊಂದಾಣಿಕೆ ಇಲ್ಲದೆ ಇಬ್ಬರ ನಡುವೆ ಶೀತಲ ಸಮರ ನಡೆಯುತ್ತಿದ್ದು, ತಹಸೀಲ್ದಾರ್‌ರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಲು ಕಾಣದ ಕೈಗಳು ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರುವುದಾಗಿ ತಿಳಿದು ಬಂದಿದೆ.