ಗ್ರಾಮ ಆಡಳಿತಾಧಿಕಾರಿಗಳ ಹೋರಾಟಕ್ಕೆ ಶಾಸಕ ಮಂಜು ಬೆಂಬಲ
Feb 17 2025, 12:34 AM ISTಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎ.ಮಂಜು ಆಗ್ರಹಿಸಿದರು. ನೌಕರರ ಬೇಡಿಕೆ ಕುರಿತು ಅಧಿಕಾರಿಗಳು ಸರ್ಕಾರಕ್ಕೆ ಸಮರ್ಪಕ ವರದಿ ನೀಡಬೇಕು. ಮುಷ್ಕರದಿಂದ ರೈತರು ಮತ್ತು ಗ್ರಾಮೀಣ ಭಾಗದ ಜನರಿಗೆ ತೀವ್ರ ರೀತಿಯ ತೊಂದರೆಯಾಗುತ್ತಿದ್ದು, ಸರ್ಕಾರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ನೌಕರರ ಬೇಡಿಕೆ ಕುರಿತು ಸದನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು. ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವುದು ಬೇಸರದ ಸಂಗತಿ ಎಂದರು.