ಶಾಸಕ ಯತ್ನಾಳರಿಂದ ಅಹೋರಾತ್ರಿ ಧರಣಿ ಇಂದು
Nov 04 2024, 12:37 AM ISTಕನ್ನಡಪ್ರಭ ವಾರ್ತೆ ವಿಜಯಪುರ ಕಾನೂನು ಬಾಹಿರವಾಗಿ ರೈತರ, ಸಂಘ-ಸಂಸ್ಥೆಗಳ, ಮಠಗಳ ಜಮೀನು, ಅಲ್ಲದೇ ಸರ್ಕಾರಿ ಜಮೀನು ಇತ್ಯಾದಿ ಆಸ್ತಿಗಳ ಉತಾರೆಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ತಕ್ಷಣ ತೆಗೆದು ಹಾಕುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನ.4ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ11ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಳಿ ನಗರದ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.