ಮಾನವ ಸರಪಳಿಗೆ ಶಾಸಕ ಮಂಜು ಚಾಲನೆ

Sep 16 2024, 01:46 AM IST
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮಕ್ಕೆ ಶಾಸಕ ಎ ಮಂಜು ಅವರು ಅರಕಲಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಡವಿನಹೊಸಳ್ಳಿಯಲ್ಲಿ ಚಾಲನೆ ನೀಡಿ, ಸಂವಿಧಾನ ಪೀಠಿಕೆ ಬೋಧಿಸಿ ಪ್ರತಿಜ್ಞೆ ಸ್ವೀಕರಿಸಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ತಳಹದಿಯ ಮೇಲೆ ಕಟ್ಟಿರುವ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾನುವಾರ ಪ್ರಜಾಪ್ರಭುತ್ವ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಜಾಪ್ರಭುತ್ವ ದಿನವನ್ನು ಒಂದು ದಿನ ಆಚರಿಸದೆ ಪ್ರತಿದಿನ ಪಾಲಿಸಬೇಕು ಎಂದ ಅವರು, ಕರೆಗೆ ಓಗೊಟ್ಟು ಶಾಲಾಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಲು ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.