ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿದ್ದ ಆದೇಶವನ್ನು ಹೈಕೋರ್ಟ್ ಅಮಾನತ್ತಿನಲ್ಲಿರಿಸಿದೆ.
ಕಾಂಗ್ರೆಸ್ ಪಕ್ಷದ ಅಧಿನಾಯಕಿ ದಿವಂಗತ ಇಂದಿರಾ ಗಾಂಧಿಯವರು ಆದೇಶಿಸಿದ್ದ ಉಳುವವನೇ ಭೂ ಒಡೆಯ ಕಾನೂನನ್ನು ಉಪಮುಖ್ಯಮಂತ್ರಿಗಳ ಬಲಗೈ ಬಂಟ ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ರವರೇ ಧಮನಗೊಳಿಸುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆಗಳ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.
ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಮಣಿದು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ನಾನು ಸುಮ್ಮನಿರಲ್ಲ. ಕ್ಷೇತ್ರದಲ್ಲಿ ಒಂದು ನಾನಿರಬೇಕು, ಇಲ್ಲ ಅಂತಹ ಅಧಿಕಾರಿಗಳಿರಬೇಕು. ನನಗೆ ಶಾಸಕ ಸ್ಥಾನ ದೊಡ್ದದಲ್ಲ. ನನ್ನ ಕಾರ್ಯಕರ್ತರೆ ನನಗೆ ದೊಡ್ಡವರು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.