ಜೆಡಿಎಸ್ ಸಮಾವೇಶಕ್ಕೆ ಹೊರಟ ವಾಹನಗಳಿಗೆ ಶಾಸಕ ಸ್ವರೂಪ್ ಚಾಲನೆ
Aug 11 2024, 01:34 AM IST ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಮೈಸೂರಿನಲ್ಲಿ ನಡೆದ ಬಿಜೆಪಿ - ಜೆಡಿಎಸ್ ಸಮಾವೇಶಕ್ಕೆ ಹಾಸನ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹೊರಟ ವಾಹನಗಳಿಗೆ ನಗರದ ಸಮೀಪ ಹೊಳೆನರಸೀಪುರ ರಸ್ತೆ ಬಳಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಪಕ್ಷದ ಬಾವುಟ ಪ್ರದರ್ಶಿಸಿ ಅಧಿಕೃತ ಚಾಲನೆ ನೀಡಿದರು. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇದರ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಆದುದರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಈ ಹೋರಾಟ ನಡೆಯುತ್ತಿದೆ ಎಂದು ಹೇಳಿದರು.