ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದು ತಪ್ಪು. ಕೇಂದ್ರದ ನಾಯಕರು ಈ ಕುರಿತು ಮರು ಪರಿಶೀಲನೆ ಮಾಡಲಿ ಎಂದು ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.
‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್ ಪವರ್’ ಬಿಜೆಪಿಗೆ ವಾಪಸ್ ಬರುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು