ಪೌರ ಕಾರ್ಮಿಕರಿಗೆ ಸನ್ಮಾನಿಸಿದ ಶಾಸಕ ಬಾಲಕೃಷ್ಣ
Oct 04 2025, 12:00 AM ISTಜನರು ಬೆಚ್ಚಗೆ ಮಲಗಿರುವ ಹೊತ್ತಿನಲ್ಲಿ ತಾವೆದ್ದು ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ಪಟ್ಟಣದ ಗರಿಮೆ ಹಿರಿಮೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಶ್ಲಾಘಿಸಿದರು. ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಃಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡುವುದು ಹೆಮ್ಮೆಯ ವಿಷಯ. ದೊಡ್ಡ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವವರನ್ನು ಸತ್ಕರಿಸುವುದು, ಗೌರವಿಸುವುದು ದೊಡ್ಡ ಕಾರ್ಯವಲ್ಲ. ಪೌರ ಕಾರ್ಮಿಕರಂತಹ ವ್ಯಕ್ತಿಗಳನ್ನು ಪ್ರತಿವರ್ಷ ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ. ನಿಮ್ಮ ಉತ್ತಮ ಆರೋಗ್ಯದಿಂದ ಪಟ್ಟಣದ ಉತ್ತಮ ಆರೋಗ್ಯ ಸಾಧ್ಯ. ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು.