ಶಾಸಕ ಸ್ಥಾನದಿಂದ ರಮೇಶ್ ಬಂಡಿಸಿದ್ದೇಗೌಡ ಅನರ್ಹಕ್ಕೆ ಆಗ್ರಹ
Jun 25 2025, 11:47 PM ISTಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರು ಮುಸ್ಲಿಂ ಸಮಾಜವನ್ನು ಅವಹೇಳನ ಮಾಡಿದ್ದು, ಕೂಡಲೇ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲು ಹಾಗೂ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಆಗ್ರಹಿಸಿ ಬುಧವಾರ ಜಿಲ್ಲಾ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯಿಂದ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಗಂಭೀರವಾಗಿ ಪರಿಗಣಿಸದೇ ಇದ್ದಲ್ಲಿ ರಾಜ್ಯಾದ್ಯಂತ ಪ್ರಜಾಸತ್ತಾತ್ಮಕವಾಗಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆಯನ್ನು ನೀಡಿದರು.