ಬಿಜೆಪಿಗೆ ಸೇರಿಸಿಕೊಳ್ಳುವಾಗ ಜಾಮೂನು, ಮೈಸೂರು ಪಾಕ್, ಜಿಲೇಬಿ ಕೊಡುತ್ತಾರೆ. ಅದೇ ಅವರ ಕೆಲಸ ಮುಗಿದ ಮೇಲೆ ವಿಷ ಕೊಡುತ್ತಾರೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಘೋಷಿಸಿದರು.