ವಿರಾಜಪೇಟೆ ಶಾಸಕ ಪೊನ್ನಣ್ಣ 50ನೇ ಜನ್ಮದಿನ: ಕೊಡಗಿನಲ್ಲಿ ವಿವಿಧ ಕಾರ್ಯಕ್ರಮ
Jul 10 2024, 12:34 AM ISTಪೊನ್ನಣ್ಣ ಅವರ 50 ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಬಳಿಕ ಮಹಾ ಗಣಪತಿ ದೇವಾಲಯದಲ್ಲಿ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದ ಆವರಣದಲ್ಲಿ ವಿಶೇಷ ಪ್ರಾರ್ಥನೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಶ್ರೀಮಹಾವಿಷ್ಣು ದೇವರಲ್ಲಿ ಪೂಜೆ ಸಲ್ಲಿಸಿದ ನಂತರ ಸುಬ್ರಮಣ್ಯ ದೇವರಲ್ಲಿ ಪ್ರಾರ್ಥಿಸಿ ಕಲ್ಲುಸಕ್ಕರೆಯ ತುಲಾಭಾರ ನೆರವೇರಿಸಿದರು.