ಡೆಂಘೀ ನಿರ್ಲಕ್ಷಿಸಿದರೆ ವೈದ್ಯರ ವಿರುದ್ಧ ಕ್ರಮ: ಶಾಸಕ ಬಸವಂತಪ್ಪ
Jul 09 2024, 12:45 AM ISTರಾಜ್ಯದಲ್ಲಿ ಡೆಂಘೀಜ್ವರ ಮರಣ ಮೃದಂಗ ಬಾರಿಸುತ್ತಿದ್ದು, ದಿನೇದಿನೇ ಸೋಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಬೇಕು. ನಿರ್ಲಕ್ಷ್ಯ ಕಂಡುಬಂದರೆ ತಪ್ಪಿತಸ್ಥ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ದಾವಣಗೆರೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.